Districts

238ಕಿ.ಮೀ.ಉದ್ದದ ಐದು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ- ಶಂಕುಸ್ಥಾಪನೆ ನೆರವೇರಿಸಿದ ನಿತಿನ್‌ ಗಡ್ಕರಿ

ಹುಬ್ಬಳ್ಳಿ:  ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು 925 ಕಿ.ಮೀ ಉದ್ದದ 26 ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಹುಬ್ಬಳ್ಳಿಯಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ರಾಜ್ಯಕ್ಕೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ (ಫೆ‌28) ನಡೆದ ಒಟ್ಟು 3972 ಕೋಟಿ ರೂಪಾಯಿ ವೆಚ್ಚದ 238 ಕಿ.ಮೀ. ಉದ್ದದ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಸಮಾರಂಭ ನೆರವೇರಿತು.

ರಾಜ್ಯದ ಐದು ಹೆದ್ದಾರಿ ಶಂಕುಸ್ಥಾಪನೆ 

ಬೆಳಗಾವಿ-ಸಂಕೇಶ್ವರ ಬೈಪಾಸ್

ಸಂಕೇಶ್ವರ ಬೈಪಾಸ್-ಮಹಾರಾಷ್ಟ್ರ ಗಡಿಯವರೆಗೆ ಷಟ್ಪಥ ನಿರ್ಮಾಣ ಕಾಮಗಾರಿ

ಚೋರ್ಲಾ-ಜಾಂಬೋಟಿ-ಬೆಳಗಾವಿ ನಡುವಿನ ದ್ವಿಪಥ ಕಾಮಗಾರಿ

ವಿಜಯಪುರ-ಮುರಗುಂಡಿ(ಎನ್.ಎಚ್.548ಬಿ)

ಸಿದ್ದಾಪುರ-ವಿಜಯಪುರ(ಎನ್.ಎಚ್.561ಎ) ಕಾಮಗಾರಿಗಳ ಲೋಕಾರ್ಪಣೆ ನಡೆಯಿತು.

ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳು ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ,ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್, ಸಾರಿಗೆ ಸಚಿವ ಶ್ರೀ ರಾಮುಲು, ಸಂಸದರಾದ ಶಿವಕುಮಾರ್ ಉದಾಸಿ ಹಾಗೂ ಮಲ್ಲಿಕಾರ್ಜುನ ಖರ್ಗೆ, ಶಾಸಕ ಅರವಿಂದ ಬೆಲ್ಲದ್, ಸೇರಿದಂತೆ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.

Share Post