Districts

ಹೊರಟ್ಟಿ ಅಲ್ಲ, ನಾನೇ ಬಿಜೆಪಿ ಅಭ್ಯರ್ಥಿ ಎಂದ ಮೋಹನ್‌ ಲಿಂಬಿಕಾಯಿ

ಹುಬ್ಬಳ್ಳಿ: ಪರಿಷತ್‌ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ. ಅದಕ್ಕಾಗಿ ಜೆಡಿಎಸ್‌ ಪಕ್ಷ ಬಿಡುತ್ತಿದ್ದೇನೆ ಎಂದು ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಇತ್ತೀಚೆಗೆ ಹೇಳಿದ್ದರು. ಆದ್ರೆ ಟಿಕೆಟ್‌ ಆಕಾಂಕ್ಷಿಯಾಗಿರುವ ಮೋಹನ್‌ ಲಿಂಬಿಕಾಯಿ ಹೇಳೋದೇ ಬೇರೆ. ಹೊರಟ್ಟಿ ಅವರ ಮಾತಿನಲ್ಲಿ ಯಾವುದೇ ಹುರುಳಿಲ್ಲ. ನಾನೇ ಬಿಜೆಪಿ ಅಭ್ಯರ್ಥಿ. ಪಕ್ಷದ ಮುಖಂಡರೆಲ್ಲಾ ನನ್ನ ಹೆಸರು ಫೈನಲ್‌ ಮಾಡಿದ್ದಾರೆ. ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ ಎಂದು ಹೇಳಿದ್ದಾರೆ.

ಮೂರು ತಿಂಗಳ ಹಿಂದೆ ನಡೆದ ಪಕ್ಷದ ಧಾರವಾಡ, ಹಾವೇರಿ, ಗದಗ ಹಾಗೂ ಉತ್ತರಕನ್ನಡ ಜಿಲ್ಲೆಯ ಕಾರ್ಯಕಾರಿಣಿ ಸಭೆಯಲ್ಲಿ ಮೂವರು ಹೆಸರುಗಳು ಪ್ರಸ್ತಾಪವಾಗಿತ್ತು. ನಾನು, ಸಂದೀಪ ಬೂದಿಹಾಳ ಮತ್ತು ಸುಧೀರ ದೇಶಪಾಂಡೆ ಅವರ ಹೆಸರುಗಳು ಪ್ರಸ್ತಾಪವಾಗಿತ್ತು. ಅಂತಿಮವಾಗಿ ನನ್ನ ಹೆಸರು ಶಿಫಾರಸು ಮಾಡಲಾಯಿತು ಎಂದು ಮೋಹನ್‌ ಲಿಂಬಿಕಾಯಿ ಹೇಳಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಜಗದೀಶ ಶೆಟ್ಟರ್ ಅವರ ಸೂಚನೆಯಂತೆ ಪರಿಷತ್ ಸದಸ್ಯ ಎಸ್‌.ವಿ. ಸಂಕನೂರ ಅವರೊಂದಿಗೆ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಸ ಮಾಡಿದ್ದೇನೆ. ಪ್ರಚಾರ ಕೈಗೊಂಡು, ಮತದಾರರ ನೋಂದಣಿ ಮಾಡಿಸುತ್ತಿದ್ದೇನೆ. ಹೊರಟ್ಟಿ ಅವರು ನಾನೇ ಬಿಜೆಪಿ ಅಭ್ಯರ್ಥಿ ಎನ್ನುವ ಮೂಲಕ, ಮತದಾರರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Share Post