ಬಿಜೆಪಿ ಸರ್ಕಾರದಲ್ಲಿ ಲಂಚ ಕೊಡದೆ ಏನೂ ನಡೆಯಲ್ಲ; ಮಲ್ಲಿಕಾರ್ಜುನ ಖರ್ಗೆ
ಮಂಗಳೂರು; ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದಾಗಿ ಕರ್ನಾಟಕ ರಾಜ್ಯಕ್ಕೆ ಕೆಟ್ಟ ಹೆಸರು ಬಂದಿದೆ. ಅದನ್ನು ತೊಡೆದು ಹಾಕಬೇಕಾದರೆ ಕಾಂಗ್ರೆಸ್ ಸರ್ಕಾರ ಬರಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಲಂಚ ಕೊಡದೆ ಯಾವ ಕೆಲಸಗಳೂ ನಡೆಯೋದಿಲ್ಲ ಎಂದು ಆರೋಪಿಸಿದರು.
ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಲವತ್ತು ಪರ್ಸೆಂಟ್ ಕಮೀಷನ್ ಪಡೆಯುತ್ತಿರುವ ಬಗ್ಗೆ ಗುತ್ತಿಗೆದಾರರೇ ಆರೋಪ ಮಾಡಿದ್ದಾರೆ. ಪ್ರಧಾನಿಗೇ ಪತ್ರ ಬರೆದಿದ್ದಾರೆ. ಇದಕ್ಕಿಂತ ಬೇರೇ ಸಾಕ್ಷಿ ಬೇಕಾ ರಾಜ್ಯ ಸರ್ಕಾರದ ಭ್ರಷ್ಟಾಚಾರಕ್ಕೆ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ.