ಕಬಿನಿ ಡ್ಯಾಂಗೆ ಒಳಹರಿವು ಹೆಚ್ಚಳ; ಪ್ರವಾಹ ಭೀತಿ
ಮೈಸೂರು; ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಕಬಿನಿ ಜಲಾಶಯದಿಂದ ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಾದರೂ ನದಿಗೆ ಬಿಡಲಾಗುತ್ತದೆ. ಆದ್ದರಿಂದ ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಜನರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ಕಬಿನಿ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಮನವಿ ಮಾಡಿದ್ದಾರೆ. ಮುಂಗಾರು ಮಳೆ ಆರಂಭವಾಗುತ್ತಿದ್ದಂತೆ ರಾಜ್ಯದಲ್ಲಿ ಮೊದಲು ತುಂಬುವ ಜಲಾಶಯ ಕಬಿನಿಯಾಗಿದೆ. ಕಬಿನಿ ಜಲಾಶಯ ಸುತ್ತಮುತ್ತಲ ಪ್ರದೇಶಗಳಿಗೆ ಆತಂಕದ ವಾತಾವರಣ ಎದುರಾಗಲಿದೆ.