CrimeDistricts

ಮನೆ ಕುಸಿದು ವೃದ್ಧೆ ಸಾವು; ಕಲಬುರಗಿಯಲ್ಲಿ ಮಳೆಯ ಅವಾಂತರ

ಕಲಬುರಗಿ; ನಾಲ್ಕು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಲಬುರಗಿ ಜಿಲ್ಲೆಯಲ್ಲಿ ಹಲವು ಮನೆಗಳು ಕುಸಿದುಬಿದ್ದಿವೆ. ಚಿತ್ತಾಪುರ ಪಟ್ಟಣದಲ್ಲಿ ಕೂಡಾ ಮನೆಯೊಂದು ಕುಸಿದಿದ್ದು, ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿವೆ.

ಆರೀಫಾ ಬೇಗಂ (60) ಮೃತ ವೃದ್ಧೆ. ಘಟನೆಯಲ್ಲಿ ಆರೀಫಾ ಬೇಗಂ ಪತಿ ಸರ್ಧಾರ್ ಅಲಿ ಹಾಗೂ ಮಗಳು ಯಾಸ್ಮಿನ್ ಬೇಗಂ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Share Post