DistrictsPolitics

ಏಪ್ರಿಲ್‌ 29ರಂದು ರಾಜ್ಯಕ್ಕೆ ಮೋದಿ, ಯೋಗಿ ಆದಿತ್ಯನಾಥ್‌

ಹುಬ್ಬಳ್ಳಿ; ದಿನದಿಂದ ದಿನಕ್ಕೆ ರಾಜ್ಯ ಚುನಾವಣಾ ಕಣ ರಂಗೇರುತ್ತಿದೆ. ಕೇಂದ್ರದ ನಾಯಕರು ಸಾಲು ಸಾಲಾಗಿ ರಾಜ್ಯಕ್ಕೆ ಬರುತ್ತಿದ್ದಾರೆ. ಇದೀಗ ಮೋದಿ ಹಾಗೂ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಏಪ್ರಿಲ್‌ 29ರಂದು ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರಕ್ಕೆ ಈ ಇಬ್ಬರು ನಾಯಕರು ಆಗಮಿಸಲಿದ್ದಾರೆ. ಈ ಬಾರಿ ಕೇಂದ್ರ ಸಚಿವ ಪ್ರಲ್ಹಾದ್‌ ಜೋಷಿ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಈ ಬಾರಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕುಡಚಿಗೆ ಬಂದ ನಂತರ ಬೆಳಗಾವಿ ಜಿಲ್ಲೆಯಲ್ಲಿ ಇನ್ನೊಂದು ಕಾರ್ಯಕ್ರಮಕ್ಕೆ ಆಗಮಿಸುವಂತೆ ಮೋದಿಯವರಿಗೆ ಮನವಿ ಮಾಡಿದ್ದೇನೆ ಎಂದು ಜೋಶಿ ಇದೇ ವೇಲೆ ಹೇಳಿದರು. ಇನ್ನು ಜಗದೀಶ್‌ ಶೆಟ್ಟರ್‌ ಪಕ್ಷ ಬಿಟ್ಟಿದ್ದರಿಂದ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ನಮ್ಮ ಅಭ್ಯರ್ಥಿ ಭಾರಿ ಅಂತರದಿಂದ ಜಯ ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಪ್ರಲ್ಹಾದ್‌ ಜೋಷಿ ವ್ಯಕ್ತಪಡಿಸಿದ್ದಾರೆ.

ಇನ್ನು ಇಂದು ಸಂಜೆ ಅಮಿತ್‌ ಶಾ ಹುಬ್ಬಳ್ಳಿಗೆ ಭೇಟಿ ನೀಡಲಿದ್ದು, ಅಲ್ಲಿ ಸ್ಥಳೀಯ ಮುಖಂಡರ ಜೊತೆ ನಡೆಸಲಿದ್ದಾರೆ ಎಂದೂ ಜೋಶಿ ಹೇಳಿದ್ದಾರೆ.

Share Post