ಮಾಜಿ ಸಿಎಂ ಸಿದ್ದರಾಮಯ್ಯ ಸಹೋದರ ರಾಮೇಗೌಡ ನಿಧನ
ಮೈಸೂರು; ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ 67 ವರ್ಷದ ರಾಮೇಗೌಡ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಕೆಲ ದಿನಗಳಿಂದ ಅವರು ಜ್ವರದಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ. ರಾಮೇಗೌಡರ ನಿಧನಕ್ಕೆ ಸಿಎಂ ಬೊಮ್ಮಾಯಿ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಿದ್ದರಾಮಯ್ಯನಹುಂಡಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.