CrimeDistricts

ಚಾಲಕನ ನಿಯಂತ್ರಣ ತಪ್ಪಿ ಟೆಂಪೋ ಪಲ್ಟಿ; ಓರ್ವ ದುರ್ಮರಣ

ಕಾರವಾರ; ಚಾಲಕನ ನಿಯಂತ್ರಣ ತಪ್ಪಿ ಟೆಂಪೊವೊಂದು ಪಲ್ಟಿಯಾಗಿದ್ದು, ದುರ್ಘಟನೆಯಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 12ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಹೊನ್ನಾವರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 69ರ ಖರ್ವಾ ತಿರುವಿನಲ್ಲಿ ಈ ದುರ್ಘಟನೆ ನಡೆದಿದೆ.

   ಜಲವಳ್ಳ ಕರ್ಕಿಯ ಹನುಮಂತ ರಾಮ ಪೂಜಾರಿ ಎಂಬುವವರೇ ಅಪಘಾಯದಲ್ಲಿ ಸಾವನ್ನಪ್ಪಿದ ದುರ್ದೈವಿ. ಗೇರುಸೊಪ್ಪ ಕಡೆಯಿಂದ ಹೊನ್ನಾವರಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವಾಗ ಈ ದುರ್ಘಟನೆ ನಡೆದಿದೆ.  ಖರ್ವಾ ಸಮೀಪ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ ಎಂದು ಹೇಳಲಾಗಿದೆ.

ಸರಳಗಿಯ ಮಹೇಶ ರಾಮಪ್ಪ ನಾಯ್ಕ ಎನ್ನುವವರ ತಲೆ ಭಾಗಕ್ಕೆ ಗಂಭೀರ ಪೆಟ್ಟಾಗಿದೆ. ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ ಗಾಯಾಳುಗಳಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share Post