CrimeDistricts

ಗ್ರಾಮ ಪಂಚಾಯತ್‌ ಪಿಡಿಒ ಆತ್ಮಹತ್ಯೆ

ಕೋಲಾರ; ಗ್ರಾಮ ಪಂಚಾಯತ್ ಪ್ರಭಾರ ಪಿಡಿಓ ಆತ್ನಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ಪೆದ್ದೂರು ಗ್ರಾಮದಲ್ಲಿ ನಡೆದಿದೆ. ವಿಶ್ವನಾಥ ರೆಡ್ಡಿ ಎಂಬುವವರೇ ಆತ್ಮಹತ್ಯೆಗೆ ಶರಣಾದ ಪಿಡಿಓ.

   ವಿಶ್ವನಾಥ ರೆಡ್ಡಿ ಮುಳಬಾಗಿಲು ತಾಲೂಕು ಲಕ್ಷ್ಮೀಸಾಗರ ಗ್ರಾಮ ಪಂಚಾಯತ್​ನಲ್ಲಿ ಪ್ರಭಾರ ಪಿಡಿಓ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೋಮವಾರ ಬೆಳಗ್ಗೆ ತೋಟದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಗೌನಿಪಲ್ಲಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share Post