ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ; ಮಾ.12ಕ್ಕೆ ವಾಹನ ಸಂಚಾರ ಮಾರ್ಗ ಬದಲಾವಣೆ
ಬೆಂಗಳೂರು; ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು – ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ.ಹೆಚ್ ಎನ್ ಗೋಪಾಲಕೃಷ್ಣ ಅವರು ಆದೇಶ ಹೊರಡಿಸಿದ್ದಾರೆ.
೧. ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು -ಬನ್ನೂರು-ಕಿರುಗಾವಲು- ಮಳವಳ್ಳಿ-ಹಲಗೂರು-ಕನಕಪುರ- ಬೆಂಗಳೂರು ಮಾರ್ಗವಾಗಿ ಸಂಚರಿಸುವುದು.
೨. ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಮೈಸೂರು-ಶ್ರೀರಂಗಪಟ್ಟಣ- ಪಾಂಡವಪುರ-ನಾಗಮಂಗಲ-ಬೆಳ್ಳೂರು ಕ್ರಾಸ್ – ತುಮಕೂರು ಮಾರ್ಗವಾಗಿ ಸಂಚರಿಸುವುದು.
೩. ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ತುಮಕೂರು-ಬೆಳ್ಳೂರುಕ್ರಾಸ್- ನಾಗಮಂಗಲ-ಪಾಂಡವಪುರ- ಶ್ರೀರಂಗಪಟ್ಟಣ ಮೈಸೂರು ಮಾರ್ಗವಾಗಿ ಸಂಚರಿಸುವುದು.
೪. ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು-ಚೆನ್ನಪಟ್ಟಣ-ಹಲಗೂರು-ಮಳವಳ್ಳಿ-ಕಿರುಗಾವಲು-ಬನ್ನೂರು – ಮೈಸೂರು ಮಾರ್ಗವಾಗಿ ಸಂಚರಿಸುವುದು.
೫. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ-ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ ವಾಹನಗಳು ಬೆಂಗಳೂರು-ಚನ್ನಪಟ್ಟಣ- ಹಲಗೂರು-ಮಳವಳ್ಳಿ-ಕೊಳ್ಳೇಗಾಲ- ಮಹದೇಶ್ವರ ಬೆಟ್ಟ ಮಾರ್ಗವಾಗಿ ಸಂಚರಿಸುವುದು.
ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಿದೆ. ತಪ್ಪಿದಲ್ಲಿ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕ್ರಮವಹಿಸಲಾಗುವುದು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.