DistrictsPolitics

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ಶಿವಮೊಗ್ಗ; ಶಿವಮೊಗ್ಗ ನೂತನ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಸೇನಾ ವಿಮಾನದಲ್ಲಿ ದೆಹಲಿಯಿಂದ ಆಗಮಿಸಿದ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ವಿಮಾನ ನಿಲ್ದಾಣದ ಬಳಿ ಬೃಹತ್‌ ವೇದಿಕೆ ನಿರ್ಮಾಣವಾಗಿದ್ದು, ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಂಡಿದ್ದಾರೆ. ಇನ್ನು ಇದೇ ಕಾರ್ಯಕ್ರಮದಲ್ಲಿ ಪಿಎಂ ಕಿಸಾನ್‌ 13ನೇ ಕಂತನ್ನು ಪ್ರಧಾನಿ ಬಿಡುಗಡೆ ಮಾಡಲಿದ್ದಾರೆ

Share Post