DistrictsPolitics

ಮಂಗಳೂರಿನ ಮೋದಿ ಕಾರ್ಯಕ್ರಮದ ಸಮಯದಲ್ಲಿ ಬದಲಾವಣೆ

ಮಂಗಳೂರು; ಪ್ರಧಾನಿ ನರೇಂದ್ರ ಮೋದಿ ಅವರು ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡುವ ಕಾರ್ಯಕ್ರಮದ ಸಮಯ ಬದಲಾವಣೆ ಆಗಿದೆ. ಮಧ್ಯಾಹ್ನ 4 ಗಂಟೆಗೆ ಬದಲಾಗಿ ಮಧ್ಯಾಹ್ನ 1.15ಕ್ಕೆ ವೇದಿಕೆ ಕಾರ್ಯಕ್ರಮ‌ ಆರಂಭವಾಗಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ ತಿಳಿಸಿದ್ದಾರೆ.

ಈ ಬಗ್ಗೆ ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾರ್ಯಕ್ರಮ ಮಧ್ಯಾಹ್ನ 4 ಗಂಟೆಗೆ‌ ನಿಗದಿಯಾಗಿತ್ತು. ಆದ್ರೆ ಬದಲಾದ ಸಮಯದಂತೆ ಮೋದಿ ಅವರು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ನವ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಭೇಟಿ ನೀಡುತ್ತಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸಭಾ ಕಾರ್ಯಕ್ರಮ‌‌ ನಡೆಯುವ ಗೋಲ್ಡ್‌ಫಿಂಚ್ ಸಿಟಿ ಮೈದಾನಕ್ಕೆ ಆಗಮಿಸುತ್ತಾರೆ ಎಂದು ಹೇಳಿದರು.

ಮೋದಿ ಅವರನ್ನು ಸ್ವಾಗತಿಸಲು ದಕ್ಷಿಣ ಕನ್ನಡ ಜಿಲ್ಲೆ ಸಜ್ಜುಗೊಂಡಿದೆ. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾ ಉಸ್ತುವಾರಿ‌ ಸಚಿವ‌ ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್ ಮುಂಚೂಣಿಯಲ್ಲಿ ನಿಂತು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು.

Share Post