ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್; ಲೇಡಿ ವಾರ್ಡನ್ ವಶಕ್ಕೆ
ಚಿತ್ರದುರ್ಗ; ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್ನಲ್ಲಿ ಎರಡನೇ ಆರೋಪಿಯಾಗಿರುವ ಮಠದ ಹಾಸ್ಟೆಲ್ನ ಲೇಡಿ ವಾರ್ಡನ್ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗದ ಡಿವೈಎಸ್ಪಿ ಹಾಗೂ ತಂಡ ಲೇಡಿ ವಾರ್ಡನ್ರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಂಜೆ ವೇಳೆ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬೆನ್ನಲ್ಲೇ ಶಿವಮೂರ್ತಿ ಶ್ರೀಗಳಿಗೂ ಬಂಧನದ ಭೀತಿ ಎದುತಾಗಿದೆ.
ನಾಳೆಯ ಜಾಮೀನು ಅರ್ಜಿ ವಿಚಾರಣೆಗೆ ಮೊದಲೇ ಶ್ರೀಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇನ್ನು ಲೇಡಿ ವಾರ್ಡನ್ ಅವರು ಮಠದ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ವಿರುದ್ಧ ಅತ್ಯಾಚಾರ ಯತ್ನ ಕೇಸ್ ದಾಖಲಿಸಿದ್ದರು. ಈ ಸಂಬಂಧ ಕೋರ್ಟ್ ಮುಂದೆ ಹಾಜರಾಗಿ ಹಾಸ್ಟೆಲ್ ವಾರ್ಡನ್ ಹೇಳಿಕೆ ದಾಖಲಿಸಿದ್ದರು. ಹೇಳಿಕೆ ದಾಖಲಿಸಿ ಬರುತ್ತಿದ್ದಂತೆ ಪೊಲೀಸರು, ಶ್ರೀಗಳ ವಿರುದ್ಧದ ಪೋಕ್ಸೋ ಕೇಸ್ನಡಿ ಹಾಸ್ಟೆಲ್ ವಾರ್ಡನ್ರನ್ನು ವಶಕ್ಕೆ ಪಡೆದಿದ್ದಾರೆ.