CrimeDistricts

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್‌; ದೂರು ದಾಖಲು

ಮೈಸೂರು;  ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನ  ವಿರುದ್ಧ ಹುಣಸೂರು ಪೊಲೀಸ್‌ ಠಾಣೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ದೂರು ದಾಖಲಿಸಿದ್ದಾರೆ.

ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರು ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ವೇಳೆ ಇದೇ ನನ್ನ ಕೊನೆ ಚುನಾವಣೆ ಎಂದು ಹೇಳಿದ್ದರು. ಈ ಕುರಿತಂತೆ ಗೋವಿಂದ ನಾಯಕ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹಾಗೂ ಶಾಂತಿ ಕದಡುವ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾನೆ ಎಂದು ಆರೋಪಿಸಿ ದೂರು ನೀಡಲಾಗಿದೆ. ಗೋವಿಂದ್ ನಾಯಕ ಹುಣಸೂರಿನ ಕಲ್ಕುಣಿಕೆಯ ನಿವಾಸಿಯಾಗಿದ್ದು, ಇದೀಗ ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಗೆ ಯೂಥ್ ಕಾಂಗ್ರೆಸ್ ದೂರು ನೀಡಿದೆ.

Share Post