ಪ್ರವೀಣ್ ಹತ್ಯೆ ಪ್ರಕರಣ; ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆ ಎಸ್ಸೈಗಳ ಎತಗ್ತಂಗಡಿ
ಮಂಗಳೂರು; ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅಂತಿಮ ಯಾತ್ರೆ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಲಾಠಿ ಚಾರ್ಚ್ ಮಾಡಿದ ಕಾರಣಕ್ಕಾಗಿ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣಾ ಎಸ್‍ಐಗಳನ್ನು ವರ್ಗಾವಣೆಗೊಳಿಸಲಾಗಿದೆ. ಪೊಲೀಸರ ವಿರುದ್ಧ ಆಕ್ರೋಶಗಳು ಕೇಳಿಬಂದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಪ್ರವೀಣ್ ಪಾರ್ಥಿವ ಶರೀರದ ಮೆರವಣಿಗೆ ವೇಳೆ ಅಂತಿಮ ನಮನ ಸಲ್ಲಿಸಲು ಬಂದಿದ್ದ ಆರ್‌ಎಸ್‌ಎಸ್‌ನ ಹಿರಿಯ ಕಾರ್ಯಕರ್ತರೊಬ್ಬರ ಮೇಲೆ ಪೊಲೀಸರು ಲಾಠಿ ಬೀಸಿ ಹೆಲ್ಮೆಟ್‌ನಿಂದ ಹೊಡೆದಿದ್ದರು. ಹೀಗಾಗಿ ಬೆಳ್ಳಾರೆ, ಸುಬ್ರಹ್ಮಣ್ಯ ಠಾಣೆಯ ಎಸ್‍ಐ ಮತ್ತು ಪೊಲೀಸರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರು ಎಸೈಗಳನ್ನು ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ವಿಟ್ಲ ಠಾಣೆಯ ಪಿಎಸ್‍ಐ ಮಂಜುನಾಥ್ ಸುಬ್ರಹ್ಮಣ್ಯ ಠಾಣೆಗೆ, ಕುಂದಾಪುರ ಗ್ರಾಮಾಂತರ ಠಾಣೆಯ ಪಿಎಸ್‍ಐ ಸುಹಾನ್ ಆರ್. ಬೆಳ್ಳಾರೆ ಠಾಣೆಗೆ ವರ್ಗಾವಣೆಗೊಳಿಸಿ ಪೊಲೀಸ್ ಮಹಾ ನಿರೀಕ್ಷಕರಾದ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ.