CrimeDistricts

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ; ಆರೋಪಿಗಳು ಎನ್‌ಐಎ ವಶಕ್ಕೆ

ಮಂಗಳೂರು; ಬಿಜೆಪಿ ಯುವ ಮುಖಂಡ ಹಾಗೂ ಹಿಂದೂ ಪರ ಸಂಘಟನೆ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣವನ್ನು ಸರ್ಕಾರ ಎನ್‌ಐಎ ವಶಕ್ಕೆ ನೀಡಿತ್ತು. ತನಿಖೆ ಆರಂಭಿಸಿದ್ದ ಎನ್‌ಐಎ ಇದೀಗ ಬಂಧಿತ ಆರೋಪಿಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಮೂಲಕ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

  ಸುಳ್ಯ ತಾಲೂಕಿನ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಐವರು ಆರೋಪಿಗಳನ್ನು  ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತಮ್ಮ ಕಸ್ಟಡಿಗೆ ಪಡೆದುಕೊಂಡಿದೆ.  ಆರೋಪಿಗಳಾದ ನೌಫಲ್ (28), ಸೈನುಲ್ ಆಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ಮತ್ತು ರಿಯಾಜ್ (27) ಅವರನ್ನು ಎನ್‌ಐಎ ಆರು ದಿನಗಳ ಕಾಲ  ವಶಕ್ಕೆ ಪಡೆದುಕೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Share Post