CrimeDistricts

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಐವರು ಆರೋಪಿಗಳ ವಿಚಾರಣೆ

ಸುಳ್ಯ; ಕಳೆದ ರಾತ್ರಿ ಬೆಳ್ಳಾರೆಯಲ್ಲಿ ಹತ್ಯೆಯಾದ ಪ್ರವೀಣ್‌ ನೆಟ್ಟಾರು ಪ್ರಕರಣ ಸಂಬಂಧ ಪೊಲೀಸರು ಐವರು ಶಂಕಿತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳ್ಳಾರೆಯಲ್ಲಿ ಐವರು ಶಂಕಿತರನ್ನು ವಶಕ್ಕೆ ತೆಗೆದುಕೊಂಡಿದ್ದು, ಅವರನ್ನು ತೀವ್ರ ವಿಚಾರಣೆಗೊಳಪಡಿಸಲಾಗಿದೆ.

ಸ್ಥಳೀಯರು ನೀಡಿದ ಮಾಹಿತಿ, ಹಿನ್ನೆಲೆ ಇತ್ಯಾದಿಗಳ ಆಧಾರದ ಮೇಲೆ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವರು ರಾತ್ರಿ ಎಲ್ಲಿದ್ದರು..?, ಪ್ರವೀಣ್‌ ಕೊಲೆಗೂ ಅವರಿಗೂ ಏನು ಸಂಬಂಧ ಎಂಬುದರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

 

Share Post