CrimeDistricts

ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ; 32 ಕಡೆ NIA ದಾಳಿ

ಮಂಗಳೂರು; ಬಿಜೆಪಿ ಯುವ ಮುಖಂಡ ಪ್ರವೀಣ್ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಅಧಿಕಾರಿಗಳು ಇಂದು  ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ ಪ್ರವೀಣ್‌ ನೆಟ್ಟಾರು ಬಲಿಯಾಗಿದ್ದರು. ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದೆ. ಆದ್ರೆ ಈ ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಎನ್‌ಐಎ ಅಧಿಕಾರಿಗಳು 32 ಕಡೆ ಮನೆ ಹಾಗೂ ಕೆಲ‌ ಖಾಸಗಿ ಕಟ್ಟಡಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕರಿಸಿದವರ ವಿಚಾರಣೆ ನಡೆಲಸಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಹೆಸರಿನ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರು (31), ಜುಲೈ 26 ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತಕ್ಷಣವೇ ಪುತ್ತೂರು ಆಸ್ಪತ್ರೆಗೆ ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದ ಕಾರಣ ಪ್ರವೀಣ್ ಮೃತಪಟ್ಟಿದ್ದರು.

 

Share Post