CrimeDistricts

ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ; ಆರೋಪಿಗಳ ಆಸ್ತಿಗಳು ಸೀಜ್‌

ಮಂಗಳೂರು; ಬೆಳ್ಳಾರೆಯಲ್ಲಿ ಹಿಂದೂ ಪರ ಸಂಘಟನೆ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತಿದೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ. ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಸಭೆ ನಡೆಸಿದ ಅವರು, ನಂತರ ಈ ವಿಚಾರ ತಿಳಿಸಿದರು.

ಬೆಳ್ಳಾರೆ ಪ್ರವೀಣ್ ಕೊಲೆ ಕೇಸ್ ನಲ್ಲಿ ಮುಖ್ಯ ಆರೋಪಿಗಳ ಬಂಧನ ಆಗಬೇಕಿದೆ. ಆರೋಪಿಗಳ ದಸ್ತಗಿರಿಗೆ ಬೇರೆ ಬೇರೆ ಜಿಲ್ಲೆಯ ಅಧಿಕಾರಿಗಳ ಸಭೆ ಮಾಡುತ್ತೇವೆ. ಪ್ರಮುಖ ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ಸಭೆ ಮಾಡಲಿದ್ದೇವೆ ಎಂದು ಹೇಳಿದ ಅಲೋಕ್‌ ಕುಮಾರ್‌ ಅವರು, ಕೋರ್ಟ್ ಮೂಲಕ ವಾರೆಂಟ್ ನೀಡುವ ಪ್ರಕ್ರಿಯೆ ಜಾರಿಯಲ್ಲಿದೆ. ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಆರೋಪಿಗಳಿಗೆ ಪಿಎಫ್‍ಐ ಲಿಂಕ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವು ಯಾವುದೇ ದಾಖಲೆ ಇಲ್ಲದೇ ಮಾತನಾಡೋದಿಲ್ಲ. ದಾಖಲೆ ಜೊತೆಗೆ ಮಾತನಾಡುತ್ತೇವೆ. ಸುಮ್ಮನೆ ಏನನ್ನೂ ಹೇಳೋದಿಲ್ಲ. ಕೆಲವು ಆರೋಪಿಗಳಿಗೆ ಪಿಎಫ್ ಐ ಲಿಂಕ್ ಇದೆ. ಈ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ. ತನಿಖೆಯ ಬಳಿಕ ಯಾರಿಗೆಲ್ಲಾ ಪಿಎಫ್‍ಐ ಲಿಂಕ್ ಇದೆ ಎಂಬುವುದರ ಬಗ್ಗೆ ಹೇಳುತ್ತೇವೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ಹೇಳಿದರು.

ಪ್ರವೀಣ್ ಹತ್ಯೆಯ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ನಮ್ಮ ಬಳಿ ಇದೆ. ಅವರ ಫೋಟೋ, ಮನೆ ವಿಳಾಸ, ತಂದೆ-ತಾಯಿ, ಹೆಂಡತಿ ಮಾಹಿತಿ ಎಲ್ಲವೂ ನಮಗೆ ಸಿಕ್ಕಿದೆ. ಆದ್ರೆ  ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ. ಆರೋಪಿಗಳು ನಿರಂತರವಾಗಿ ಸ್ಥಳ ಬದಲಾವಣೆ ಮಾಡುತ್ತಿದ್ದಾರೆ. ಪೊಲೀಸರ ದಾಳಿ ವೇಳೆ ಮೊದಲೇ ಮಾಹಿತಿ ಪಡೆದುಕೊಂಡು ಪರಾರಿಯಾಗುತ್ತಿದ್ದಾರೆ ಎಂದು ಮಾಹಿತಿ ನೀಡಿದರು

 

Share Post