DistrictsPolitics

ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್‌ ನೀಡದಂತೆ ಪ್ರತಿಭಟನೆ; ವಿಜಯ ಸಂಕಲ್ಪ ಯಾತ್ರೆ ರದ್ದು

ಚಿಕ್ಕಮಗಳೂರು; ಬಿಜೆಪಿ ಸಂಕಲ್ಪ ಯಾತ್ರೆ ವೇಳೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ಹೈಡ್ರಾಮಾ ನಡೆದಿದೆ. ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಮೂಡಿಗರೆಯಲ್ಲಿ ವಿಜಯ ಸಂಕಲ್ಪ ಯಾತ್ರೆ ಆಯೋಜಿಸಲಾಗಿತ್ತು. ಯಡಿಯೂರಪ್ಪ ಅವರು ರೋಡ್‌ ಶೋ ನಡೆಸುತ್ತಿದ್ದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಹಾಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಪ್ರತಿಭಟನೆ ನಡೆಸಿದರು. ಇದರಿಂದಾಗಿ ಬಿಎಸ್‌ವೈ ಯಾತ್ರೆ ನಿಲ್ಲಿಸಿ ಚಿಕ್ಕಮಗಳೂರಿಗೆ ತೆರಳಿದರು.

ಸ್ಥಳೀಯ ಬಿಜೆಪಿ ಕಾರ್ಯಕರ್ತರು ಎಂ.ಪಿ.ಕುಮಾರಸ್ವಾಮಿಗೆ ಟಿಕೆಟ್‌ ನೀಡಬಾರದು ಎಂದು ಆಗ್ರಹಿಸಿ ಪ್ರತಿಭಟನೆ ಮಾಡಿದ್ದಾರೆ. ಯಡಿಯೂರಪ್ಪ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಸಿ.ಟಿ.ರವಿ ಹಾಗೂ ಎಂಎಲ್‌ಸಿ ಪ್ರಾಣೇಶ್‌ ಕೂಡಾ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದ ಮುಜುಗರಕ್ಕೊಳಗಾದ ನಾಯಕರು, ಯಾತ್ರೆ ನಿಲ್ಲಿಸಿ ಚಿಕ್ಕಮಗಳೂರಿಗೆ ವಾಪಸ್ಸಾಗಿದ್ದಾರೆ.

Share Post