Districts

ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರ; ಅಫಜಲಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷನ ಬಂಧನ

ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳು ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇತ್ತೀಚೆಗಷ್ಟೇ, ಕಾಂಗ್ರೆಸ್‌ ಶಾಸಕ ಗನ್‌ಮ್ಯಾನ್‌ ಅರೆಸ್ಟ್‌ ಮಾಡಿದ್ದ ಸಿಐಡಿ ಅಧಿಕಾರಿಗಳು ಈಗ ಅಫಜಲಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ಅಫಲಜಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಾಂತೇಶ್‌ ಪಾಟೀಲ್‌ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ವಿಚಾರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಸಿಐಡಿ ಅಧಿಕಾರಿಗಳು ಈಗಾಗಲೇ ಹತ್ತಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ, ಹಗರಣ ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೊಂದೆಡೆ ತಲೆಮರೆಸಿಕೊಂಡಿರುವ ದಿವ್ಯಾ ಹಾಗರಗಿಗಾಗಿಯೂ ಹುಡುಕಾಟ ನಡೆದಿದೆ.

 

Share Post