Districts

ಪ್ರಿಯಾಂಕ್‌ ಖರ್ಗೆರಿಂದ ಆಡಿಯೋ ಬಾಂಬ್‌; ಪಿಎಸ್‌ಐ ಹುದ್ದೆ ಬಿಜೆಪಿ ಕಾರ್ಯಕರ್ತರೇ ಆಯ್ಕೆಯಾಗಿರುವ ಆರೋಪ

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತ ಹಯ್ಯಾಳಿ ದೇಸಾಯಿ ವ್ಯಕ್ತಿಯೊಬ್ಬರ ಜೊತೆ ಮಾತನಾಡಿದ್ದಾರೆನ್ನಲಾದ ಆಡಿಯೋ ಒಂದನ್ನು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಬಿಡುಗಡೆ ಮಾಡಿದ್ದಾರೆ. ಈ ಆಡಿಯೋದಲ್ಲಿ ಆಯ್ಕೆ ಪಟ್ಟಿಯಲ್ಲಿರುವ ಎಲ್ಲಾ 545 ಹುದ್ದೆಗಳನ್ನೂ ಫಿಕ್ಸ್‌ ಮಾಡಲಾಗಿದೆ ಎಂದು ಮಾತನಾಡಿದ್ದಾರೆ ಎಂದು ತಿಳಿದುಬಂದಿದೆ.

ಆಡಿಯೋ ಬಿಡುಗಡೆ ಮಾಡಿ ಮಾತನಾಡಿರುವ ಪ್ರಿಯಾಂಕ್‌ ಖರ್ಗೆ, ಈ ಹಗರಣದಲ್ಲಿ ದೊಡ್ಡವರ ಕೈವಾಡ ಇದೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ಇದುವರೆಗೂ ಬಂಧನವಾಗಿರುವವರೆಲ್ಲಾ ಬಿಜೆಪಿ ಕಾರ್ಯಕರ್ತರೇ. ಬಿಜೆಪಿ ಕಾರ್ಯಕರ್ತರೇ ಹೆಚ್ಚಾಗಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಶ್ರೀರಾಮ ಸೇನೆ, ಎಬಿವಿಪಿ ಕಾರ್ಯಕರ್ತರೂ ಇದ್ರಲ್ಲಿ ಆಯ್ಕೆಯಾಗಿದ್ದಾರೆ ಎಂದು ಆರೋಪಿಸಿದ್ದಾರೆ.

Share Post