CrimeDistricts

ಮಹಿಳಾ ಪಿಎಸ್‌ಐ ಆತ್ಮಹತ್ಯೆಗೆ ಯತ್ನ

ಮಂಗಳೂರು; ಸಿಐಎಸ್ಎಫ್ ನ ಮಹಿಳಾ ಪಿಎಸ್ಐ ಒಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

  ಎನ್​ಎಂಪಿಎಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ  ಜ್ಯೋತಿ ಬಾಯಿ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿರುವ ಪಿಎಸ್‌ಐ. ಅವರು ಇವತ್ತು ಬೆಳಗ್ಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದಾರೆ.

ಜ್ಯೋತಿ ಬಾಯಿ ವಾರ ಪತಿ ಓಂಬೀರ್ ಸಿಂಗ್ ಎಂಆರ್​ಪಿಎಲ್ ನಲ್ಲಿ ಅಸಿಸ್ಟೆಂಟ್ ಕಮಾಂಡೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ರಾಜಸ್ಥಾನ ಮೂಲದವರು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಕೌಟುಂಬಿಕ ಜಗಳದಿಂದಾಗಿ ಆತ್ಮಹತ್ಯೆ ಯತ್ನ ನಡೆದಿದೆ ಎಂದು ಹೇಳಲಾಗುತ್ತಿದೆ.

Share Post