Districts

ವಾಟ್ಸಾಪ್ ನಲ್ಲಿ ಪಿಯುಸಿ ಪ್ರಶ್ನೆ ಪತ್ರಿಕೆ:ಪರೀಕ್ಷೆ ಮುಂದೂಡಿಕೆ

ತುಮಕೂರು; ವಾಟ್ಸಾಪ್ ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಹಿನ್ನೆಲೆ ಶಿಕ್ಷಣ ಇಲಾಖೆ ಪರೀಕ್ಷೆಯನ್ನ ಮುಂದೂಡಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯಲ್ಲಿ ಪ್ರಥಮ ಪಿಯುಸಿ ಆಂಗ್ಲ ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಹಿನ್ನೆಲೆ ಪರೀಕ್ಷೆ ಯನ್ನ ಮಂದೂಡಲಾಗಿದೆ. ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪರೀಕ್ಷೆಯನ್ನ ಮಾ.6 ಕ್ಕೆ ಮುಂದೂಡಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಾಧರ್ ಆದೇಶ ಹೊರಡಿಸಿದ್ದಾರೆ.

ಫೆ.20 ರಿಂದ ಪ್ರಥಮ ಪಿಯುಸಿ ಪರೀಕ್ಷೆಗಳು ಪ್ರಾರಂಭವಾಗಿದೆ. ಇಂದು ನಡೆಯಬೇಕಿದ್ದ ಆಂಗ್ಲ ಭಾಷೆ ಪ್ರಶ್ನೆ ಪತ್ರಿಕೆ ವಾಟ್ಸಾಪ್ ನಲ್ಲಿ ಸೋರಿಕೆ ಯಾಗಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಪರೀಕ್ಷೆಯನ್ನ ಮುಂದೂಡಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ತನಿಖೆ ನಡೆಸಲು ಹಿರಿಯ ಪ್ರಾಂಶುಪಾಲರ ನೇತೃತ್ವದಲ್ಲಿ ತಂಡ ರಚನೆ ಮಾಡಲಾಗಿದೆ. ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ದಾಖಲಿಸಲು ನಿರ್ಧರಿಸಲಾಗಿದೆ ಎಂದು ಪದವಿ ಪೂರ್ವ ಶಿಕ್ಷ ಇಲಾಖೆ ಉಪ ನಿರ್ಧೇಶಕ ಗಂಗಾಧರ್ ತಿಳಿಸಿದ್ದಾರೆ.

Share Post