CrimeDistricts

ವಿದ್ಯಾರ್ಥಿಗಳ ಗುಂಪುಗಳ ನಡುವೆ ಜಗಳ; ಬಿಡಿಸಲು ಹೋದ SI ಮೂಗಿಗೆ ಗಾಯ..!

ಬೆಳಗಾವಿ; ಬೆಳಗಾವಿಯಲ್ಲಿ ರಾಮದರ್ಗ ಪಟ್ಟಣದಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳು ಬೀದಿಯಲ್ಲೇ ಬಡಿದಾಡಿಕೊಂಡಿವೆ. ಹೈಸ್ಕೂಲ್‌ ಹುಡುಗರ ಗುಂಪುಗಳು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದು, ಈ ವೇಳೆ ಜಗಳ ಬಿಡಿಸಲು ಹೋದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ಒಬ್ಬರು ಗಾಯಗೊಂಡಿದ್ದಾರೆ.

ರಾಮದುರ್ಗ ಪಟ್ಟಣದ ಶಾಲೆಯೊಂದರ ಹೈಸ್ಕೂಲ್‌ ವಿದ್ಯಾರ್ಥಿಗಳು ಕಬಡ್ಡಿ ಅಭ್ಯಾಸ ಮಾಡುತ್ತಿದ್ದರು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿದೆ. ಈ ವೇಳೆ ಮಧ್ಯೆ ಪ್ರವೇಶಿಸಿದ ಶಿಕ್ಷಕರು ಎರಡೂ ಕಡೆಯವರನ್ನು ಸಮಾಧಾನ ಮಾಡಿ ಕಳುಹಿಸಿದ್ದಾರೆ. ನಂತರ ಅದೇ ವಿದ್ಯಾರ್ಥಿಗಳು ಬಸ್‌ ನಿಲ್ದಾಣದ ಬಳಿ ಬಡಿದಾಡಿಕೊಂಡಿದ್ದಾರೆ. ಈ ವೇಳೆ ಸ್ಥಳೀಯರು ವಿದ್ಯಾರ್ಥಿಗಳನ್ನು ಸಮಾಧಾನ ಮಾಡಲು ಯತ್ನಿಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಹುಡುಗರನ್ನು ಚದುರಿಸಲು ಪ್ರಯತ್ನಿಸಿ ಹೈರಾಣಾಗಿದ್ದಾರೆ. ಹೊಡೆದಾಡ್ತಿಕೊಳ್ತಿದ್ದ ಹುಡುಗರನ್ನು ಚದುರಿಸಲು ಹೋದಾಗ ಎಸ್‌ಐ ಮೂಗಿಗೆ ಗಾಯವಾಗಿದ್ದು ರಕ್ತ ಸೋರಿದೆ. ಎರಡೂ ಗುಂಪಿನ ಕೆಲ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮುಚ್ಚಳಿಕೆ ಪತ್ರ ಬರೆಸಿಕೊಂಡು ಕಳುಹಿಸಿದ್ದಾರೆ.

Share Post