ಜ್ಯೂನಿಯರ್ ಎನ್‌ಟಿಆರ್ ಹಾಡಿಗೆ ಸ್ಟೆಪ್ಸ್ ಹಾಕಿದ ರಮೇಶ್‌ಕುಮಾರ್
ಕೋಲಾರ; ಶಾಸಕ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಿರುತ್ತಾರೆ. ಅವರು ಇದೀಗ ಡ್ಯಾನ್ಸ್ ಮಾಡುವ ಮೂಲಕ ಎಲ್ಲರ ಗನ ಸೆಳೆದಿದ್ದಾರೆ. ಶ್ರೀನಿವಾಸಪುರದಲ್ಲಿ ನಡೆದ ರಸಮಂಜರಿ ಕಾರ್ಯಕ್ರಮದಲ್ಲಿ ಅವರು ತೆಲುಗಿನ ಜ್ಯೂನಿಯರ್ ಎನ್‌ಟಿಆರ್ ಅವರ ರೆಂಡು ವೇಲ ರೆಂಡುವರಕು ಚೂಡಲೇದು.. ಎಂಬ ಹಾಡಿಗೆ ಸ್ಟೆಪ್ಸ್ ಹಾಕಿದ್ದಾರೆ.
Video Player
00:00
00:00
ಶ್ರೀನಿವಾಸಪುರ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಸಂಜೆ ರಸ ಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶ್ರೀನಿವಾಸಪುರದ ಶಾಸಕರಾಗಿರುವ ರಮೇಶ್ ಕುಮಾರ್ ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ವೇಳೆ ಅವರು ತೆಲುಗಿನ ಜನಪ್ರಿಯ ಹಾಡಿಗೆ ಹೆಜ್ಜೆ ಹಾಕಿದರು.