CrimeDistricts

ರಾಮೇಶ್ವರಂ ಕೆಫೆ ಪ್ರಕರಣ; ಅಗತ್ಯಬಿದ್ದರೆ ಎನ್‌ಐಎ ತನಿಖೆ ಮಾಡಿಸುತ್ತೇವೆ; ಸಿಎಂ

ಚಿಕ್ಕಮಗಳೂರು; ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ  ಸಂಭವಿಸಿ ಮೂರು ದಿನ ಕಳೆದಿದೆ. ಆದರೂ ಇನ್ನೂ ಆರೋಪಿಯ ಸುಳಿವು ಸಿಕ್ಕಿಲ್ಲ. ಸಧ್ಯಕ್ಕೆ ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಗಳಲ್ಲಿ ಆರೋಪಿಯ ಚಲನವಲನ ದಾಖಲಾಗಿದ್ದರೂ, ಆತನನ್ನು ಹಿಡಿಯಲು ಇನ್ನೂ ಸಾಧ್ಯವಾಗಿಲ್ಲ. ಕಳೆದ ಮೂರು ದಿನಗಳಿಂದ ಸುಮಾರು ಎಂಟು ತಂಡಗಳು ಆರೋಪಿಗಾಗಿ ತಲಾಷ್‌ ನಡೆಸುತ್ತಿವೆ. ಆದರೂ ಯಾವುದೇ ಪ್ರಗತಿ ಕಂಡಿಲ್ಲ.

ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಸಿಸಿಬಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇನ್ನೂ ಆರೋಪಿಯ ಸುಳಿವು ಸಿಕ್ಕಿಲ್ಲ. ಅಗತ್ಯಬಿದ್ದರೆ ತನಿಖೆಯ ಹೊಣೆಯನ್ನು ಎನ್‌ಐಎಗೆ ವಹಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  ಬಿಜೆಪಿ ನಾಯಕರು ಈ ಪ್ರಕರಣವನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿಸಿದ್ದಾರೆ. ಇದರಿಂದಾಗಿ ಏನೂ ಪ್ರಯೋಜನವಿಲ್ಲ ಎಂದೂ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಎನ್​ಐಗೆ ನೀಡಬೇಕೆಂಬ ಬಿಜೆಪಿ ನಾಯಕರು ಆಗ್ರಹ ಮಾಡಿದ್ದಾರೆ. ಈಗ ಸಿಸಿಬಿ ತನಿಖೆ ನಡೆಯುತ್ತಿದೆ. ಅಗತ್ಯಬಿದ್ದರೆ ಎನ್‌ಐಗೆ ವಹಿಸೋದಕ್ಕೆ ನಮ್ಮ ಸರ್ಕಾರ ಸಿದ್ಧವಿದೆ. ಪ್ರಕರಣವನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ಈ ಬಗ್ಗೆ ಸಿದ್ದರಾಮಯ್ಯ ಅವರು ಟ್ವೀಟ್‌ ಕೂಡಾ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲೇನಿದೆ..?

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣವನ್ನು ಸಿಸಿಬಿಗೆ ವಹಿಸಲಾಗಿದೆ. ಈ ಸಂಬಂಧ ತನಿಖೆ ಪ್ರಗತಿಯಲ್ಲಿದ್ದು, ಆರೋಪಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಅಗತ್ಯ ಬಿದ್ದರೆ ಎನ್.ಐ.ಎ ಗೆ ವಹಿಸುವ ಬಗ್ಗೆಯೂ ಚಿಂತನೆ ನಡೆಸಲಾಗುವುದು.
ಬಾಂಬ್ ಸ್ಫೋಟದಂತಹ ಪ್ರಕರಣಗಳು ಸಣ್ಣ ಘಟನೆಗಳಾಗುವುದಿಲ್ಲ. ಜನರ ಸುರಕ್ಷತೆಯ ದೃಷ್ಟಿಯಿಂದ ಸರ್ಕಾರ ಇದನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ.

ಬಿಜೆಪಿ ನಾಯಕರು ಈ ಬಗ್ಗೆ ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಫೋಟವಾಗಿದ್ದಾಗ ಬೆಂಗಳೂರು ಏನಾಗಿತ್ತು? ಬಾಂಬ್ ಬೆಂಗಳೂರು ಆಗಿತ್ತೆ? 2008 ರಿಂದ 4 ಬಾರಿ ಬಾಂಬ್ ಬ್ಲಾಸ್ಟ್ ಆಗಿದ್ದಕ್ಕೆ ಏನೆಂದು ಕರೆಯಬೇಕು? ಇದು ದೇಶದ ರಕ್ಷಣೆಯ ಹೊಣೆ ಹೊತ್ತಿರುವ ಎನ್.ಐ.ಎ, RAW ಗಳ ವೈಫಲ್ಯವಲ್ಲವೇ? ನಾನು ಬಾಂಬ್ ಸ್ಪೋಟವನ್ನು ಖಂಡಿಸುತ್ತೇನೆ. ಸಾವು ನೋವಿನ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡಬಾರದು.

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿತ್ತು ಹಾಗೂ ಹಿಂದೊಮ್ಮೆ ಬಿಜೆಪಿ ಕಚೇರಿ ಮುಂದೆಯೇ ಬಾಂಬ್ ಸ್ಫೋಟವಾಗಿತ್ತು. ಆಗ ಬಿಜೆಪಿಯೇ ಅಧಿಕಾರದಲ್ಲಿದ್ದರು. ಅವರಂತೆಯೇ ಇದನ್ನು ನಾವು ರಾಜಕೀಯ ದೃಷ್ಟಿಯಿಂದ ನೋಡಿದೆವಾ?

Share Post