CrimeDistricts

ಅತ್ಯಾಚಾರ, ಕೊಲೆ ಆರೋಪಿಗಳ ಬಂಧನ

ಮಂಗಳೂರು: ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಮಂಗಳೂರು ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ನವೆಂಬರ್ 21ರಂದು ನಾಲ್ವರು ದುಷ್ಕರ್ಮಿಗಳು ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಕೊಲೆ ಮಾಡಿ ಪರಾರಿಯಾಗಿದ್ದರು. ಹೆಂಚಿನ ಕಾರ್ಖಾನೆಯೊಂದರಲ್ಲಿ ಬಾಲಕಿ ಮೇಲೆ ಕಾಮುಕರು ಅಟ್ಟಹಾಸಗೈದಿದ್ದರು. ಈ ವೇಳೆ ಬಾಲಕಿ ಕಿರುಚಿಕೊಂಡಾಗ, ಕತ್ತು ಹಿಸುಕಿ ಕೊಲೆ ಮಾಡಿದ್ದರು. ಈ ಬಗ್ಗೆ ಕೇಸ್‌ ದಾಖಲಿಸಿಕೊಂಡಿದ್ದ ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಹೆಂಚಿನ ಕಾರ್ಖಾನೆಯೊಂದರಲ್ಲಿ ನವೆಂಬರ್‌ 21ರಂದು ನಡೆಯಬಾರದ ಘಟನೆಯೊಂದು ನಡೆದು ಹೋಗಿತ್ತು. ಹೆಂಚಿನ ಕಾರ್ಖಾನೆಯಲ್ಲಿ ಕರ್ನಾಟಕ ಮತ್ತು ಉತ್ತರ ಭಾರತ ಮೂಲದ ಒಟ್ಟು 29 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅದರಲ್ಲಿ ಜಾರ್ಖಂಡ್ ಮೂಲದ ಕುಟುಂಬ ಕೂಡ ಇತ್ತು. ಆ ಕುಟುಂಬದ ಅಪ್ರಾಪ್ತ ಬಾಲಕಿಯೇ ಅತ್ಯಾಚಾಕ್ಕೀಡಾಗಿ ಕೊಲೆಯಾದವಳು. ಘಟನೆ ನಂತರ ಹೆಂಚಿನ ಫ್ಯಾಕ್ಟರಿಯ ಡ್ರೈನೇಜ್‌ನಲ್ಲಿ ಮೃತದೇಹ ಪತ್ತೆಯಾಗಿತ್ತು.

Share Post