Districts

ಫ್ರೌಢಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಒಮಿಕ್ರಾನ್‌

ಹಗರಿಬೊಮ್ಮನಹಳ್ಳಿ: ಮಹಾಮಾರಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದೆ. ರೂಪಾಂತರಿ ತಳಿ ಒಮಿಕ್ರಾನ್‌ ಭೀತಿ ಶುರುವಾಗಿದೆ. ಈಗಾಗಲೇ ರಾಜ್ಯದಲ್ಲಿ ಒಮಿಕ್ರಾನ್ ವ್ಯಾಪಕವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಲವು ಕಠಿಣ ಕ್ರಮ ಜಾರಿಗೊಳಿಸಿದೆ. ಅಷ್ಟೇ ಅಲ್ಲದೆ ಇಂದಿನಿಂದ ೧೫ ವರ್ಷ ಮೇಲ್ಪಟ್ಟ ಮಕ್ಕಳಿಗೆ ಕೊರೋನಾ ಲಸಿಕೆಗೆ ಚಾಲನೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಸಹ ಲಸಿಕೆಗಾಗಿ ಮಕ್ಕಳು ಮುಗಿಬಿದ್ದಾರೆ. ಆದರೆ ಇಲ್ಲೊಂದು ಶಾಲೆಯಲ್ಲಿ ಕೊರೋನಾ ರೂಪಾಂತರಿ ತಳಿ ಒಮಿಕ್ರಾನ್‌ ದೃಡಪಟ್ಟಿದೆ.
ಹೌದು ವಿಜಯನಗರ ಜಿಲ್ಲೆಯ ಹಗರಿಬೊಮ್ಮಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಒಮಿಕ್ರಾನ್‌ ಸೋಂಕು ತಗಲಿದೆ ಎಂದು ವೈದ್ಯಾಧಿಕಾರಿ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಫ್ರೌಢಶಾಲೆಗೆ ಇಂದಿನಿಂದ ಐದು ದಿನಗಳ ಕಾಲ ರಜೆ ಘೋಷಿಸಿದೆ.
ಇನ್ನು ಸೋಂಕಿತ ಮಕ್ಕಳೊಂದಿಗೆ ಸಂಪರ್ಕದಲ್ಲಿ ಇದ್ದ ಎಲ್ಲ ಮಕ್ಕಳಿಗೂ ಕೂಡ ಆರ್ ಟಿಪಿಸಿಆರ್‌ ಟೆಸ್ಟ್‌ ಮಾಡಲಾಗಿದೆ. ಕಳೆದ ವಾರವೇ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಿಸಲಾಯಿತ್ತು.

Share Post