Districts

ಅಂಜನಾದ್ರಿ ಬೆಟ್ಟದಲ್ಲಿ ಚಿರತೆಗಳ ಹೆಚ್ಚಳ; ಭಕ್ತರಿಗೆ ಹಲವು ನಿರ್ಬಂಧ

ಗಂಗಾವತಿ; ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಚಿಕ್ಕರಾಂಪುರದ ಧಾರ್ಮಿಕ ಸ್ಥಳ ಅಂಜನಾದ್ರಿ ಬೆಟ್ಟದ ಸಮೀಪ ಇತ್ತೀಚೆಗೆ ಚಿರತೆಗಳು ಕಂಡು ಬಂದಿರುವ ಹಿನ್ನೆಲೆ ಬೆಟ್ಟಕ್ಕೆ ಬರುವ ಭಕ್ತರ ಸುರಕ್ಷತೆಯ ದೃಷ್ಟಿಯಿಂದ ಕೆಲ ಷರತ್ತುಗಳನ್ನು ಹಾಕಿ ನಿರ್ಬಂಧ ವಿಧಿಸಲಾಗಿದೆ.

480ಕ್ಕೂ ಹೆಚ್ಚು ಅಡಿಗಳ ಎತ್ತರದ ಬೆಟ್ಟದ ಮೇಲಿರುವ ಆಂಜನೇಯನ ದರ್ಶನ ಪಡೆಯಲು ಭಕ್ತರಿಗೆ ಬೆಳಗ್ಗೆ 8 ರಿಂದ ಮಧ್ಯಾಹ್ನ 3ರವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಬೆಟ್ಟದ ಮೇಲೆ ಫೊಟೋ ಕ್ಲಿಕ್ಕಿಸಿಕೊಳ್ಳುವುದನ್ನು ನಿರ್ಬಂಧಿಸಿ ದೇಗುಲದ ಆಡಳಿತಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಚಿರತೆಗಳ ಚಲನವಲನ ದೇಗುಲದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಜೊತೆಗೆ ದೇಗುಲ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿ ಬರುತ್ತಿದ್ದು, ವನ್ಯ ಪ್ರಾಣಿಗಳ ಆವಾಸ ಸ್ಥಾನವಾದ ಹಿನ್ನೆಲೆ ಅರಣ್ಯ ಇಲಾಖೆಯ ಅಧಿಕಾರಿಗಳ ಸೂಚನೆ ಮೇರೆಗೆ ದೇಗುಲದ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ.

Share Post