CrimeDistricts

ಬೀದರ್‌ ಬಳಿ ಭೀಕರ ಅಪಘಾತ; ಇಬ್ಬರ ದುರ್ಮರಣ

ಬೀದರ್; ಬೀದರ್‌ನ ಭಾಲ್ಕಿ ತಾಲ್ಲೂಕಿನ ಅಂಬೆಸಂಗವಿ ಬಳಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಹಾಗೂ ಕಂಟೇನರ್‌ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರೂ ಚಾಲಕರು ಸಾವನ್ನಪ್ಪಿದ್ದಾರೆ.

ಚಾಲಕರಾದ ವಿಜಯಕುಮಾರ್(40) ಹಾಗೂ ರಾಮ್‍ಕಿಶನ್ (32) ಮೃತಪಟ್ಟ ದುರ್ದೈವಿಗಳು. ಲಾರಿ ಹಾಗೂ ಕಂಟೇನರ್‌ನಲ್ಲಿ ಪ್ರಯಾಣಿಸುತ್ತಿದ್ದ ಇನ್ನೂ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಐಸಿಯುನಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿದೆ.

ಗುಜರಾತಿನಿಂದ ಟೈಲ್ಸ್ ತರುತ್ತಿದ್ದ ಲಾರಿಗೆ ಕಂಟೇನರ್ ಲಾರಿ ಡಿಕ್ಕಿಯಾಗಿದೆ. ಲಾರಿ ಚಾಲಕನ ಅತಿವೇಗದ ಚಾಕನೆಯೇ ಕಾರಣ ಎಂದು ಹೇಳಲಾಗುತ್ತಿದೆ.

 

Share Post