CrimeDistrictsNational

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ; ಬೆಳಗಾವಿಯ 5 ಮಂದಿ ದುರ್ಮರಣ

ಬೆಳಗಾವಿ; ತೆಲಂಗಾಣದಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಳಗಾವಿಗೆ ಸೇರಿದ ಒಂದೇ ಕುಟುಂಬದ ಐವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ಅಥಣಿ ತಾಲ್ಲೂಕಿನ ಬಡಚಿ ಗ್ರಾಮದವರು ಎಂದು ಗುರುತಿಸಲಾಗಿದೆ. ತೆಲಂಗಾಣದ ಸೂರ್ಯಪೇಟ ಬಳಿಯ ಮಠಮಪಲ್ಲಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಇಂದು ಬೆಳಗಿನ ಜಾವ 3.30 ರ ಸುಮಾರಿಗೆ ಕಡಪ-ಚಿತ್ತೂರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಸರ್ ಹಾಗೂ ಲಾರಿ ನಡುವೆ ಅಪಘಾತ ನಡೆದಿದೆ.  ಕ್ರೂಸರ್​ನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಬಡಚಿ ಗ್ರಾಮದ ಶೋಭಾ ಆಜೂರ (36), ಅಂಬಿಕಾ ಆಜೂರ (14), ಮಾನಂದಾ ಆಜೂರ (32), ಹನುಮಂತ ಆಜೂರ (42) ಚಾಲಕ ಹನುಮಂತ ಜಾಧವ (32) ಮೃತಪಟ್ಟವರು. ಅಪಘಾತದಲ್ಲಿ ಇನ್ನೂ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ರೂಸರ್‌ ವಾಹನದಲ್ಲಿ ಪ್ರವಾಸಕ್ಕೆ ತೆರಳಿದ್ದರು. ಮೊದಲಿಗೆ ಶ್ರೀಶೈಲಕ್ಕೆ ಭೇಟಿ ನೀಡಿದ್ದ ಕುಟುಂಬದ ಸದಸ್ಯರು, ನಂತರ ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮುಗಿಸಿದ್ದರು. ನಂತರ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

 

Share Post