CrimeDistricts

ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಕ್ರೂಸರ್‌; ದಂಪತಿ ದುರ್ಮರಣ

ವಿಜಯಪುರ; ವಿಜಯಪುರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದೆ. ಇಂಡಿ ತಾಲ್ಲೂಕಿನ ಧೂಳಖೇಡ್‌ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಹಿಂದಿನಿಂದ ಕ್ರೂಸರ್‌ ವಾಹನ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಘಟೆನಯಲ್ಲಿ ಅಥಣಿ ಮೂಲದ ದಂಪತಿ ಸಾವನ್ನಪ್ಪಿದ್ದಾರೆ.

ಭಯ್ಯಾಜಿ ಶಿಂಧೆ (50), ಸುಮಿತ್ರಾ ಶಿಂಧೆ (45) ಮೃತ ದಂಪತಿ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಇನ್ನೂ ಒಂಬತ್ತು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಮಹಾರಾಷ್ಟ್ರದ ಸೊಲ್ಲಾಪುರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇವರೆಲ್ಲಾ ಅಥಣಿಯಿಂದ ಕ್ರೂಸರ್‌ ವಾಹನದಲ್ಲಿ ಮಹಾರಾಷ್ಟ್ರದ ಅಕ್ಕಲಕೋಟ ಬಳಿಯ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

Share Post