CrimeDistricts

ಗದಗ ಬಳಿ ಭೀಕರ ರಸ್ತೆ ಅಪಘಾತ; ಐದು ಮಂದಿ ದುರ್ಮರಣ

ಗದಗ; ಗದಗ ಜಿಲ್ಲೆ ಗಜೇಂದ್ರ ಗಡ ತಾಲ್ಲೂಕಿನ ನರೇಗಲಕ್‌ ಬಳಿ  ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್‌ ಹಾಗೂ ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿದ್ದು, ಐದು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇಂದು ಮುಂಜಾನೆ ಈ ದುರಂತ ನಡೆದಿದೆ.

ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಸುಮೋ ಬಹುತೇಕ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರೇಗಲ್‌ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

 

Share Post