DistrictsPolitics

ಕಾರಿನಲ್ಲಿ ಐದು ಕೋಟಿ ರೂಪಾಯಿ ಪತ್ತೆ; ಐವರ ವಶ

ಬಾಗಲಕೋಟೆ; ಮುಧೋಳ ಬಳಿ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ. ಚುನಾವಣಾಧಿಕಾರಿಗಳು ಪರಿಶೀಲನೆ ವೇಳೆ ಕಾರಿನಲ್ಲಿ ಐದು ಕೋಟಿ ರೂಪಾಯಿ ಪತ್ತೆಯಾಗಿದೆ. ಇದಕ್ಕೆ ಸೂಕ್ತ ದಾಖಲೆಗಳು ತೋರಿಸದ ಕಾರಣ ಹಣವನ್ನು ವಶಪಡಿಸಿಕೊಂಡಿದ್ದು, ಕಾರಿನಲ್ಲಿದ್ದ ಐವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಬೊಲೆರೋ ವಾಹನ ಹುಬ್ಬಳ್ಳಿಯಿಂದ ಮುಧೋಳ ಮಾರ್ಗವಾಗಿ ಸಂಚರಿಸುತ್ತಿತ್ತು. ಇದೇ ವೇಳೆ ಲೋಕಾಪುರ ಪೊಲೀಸರು ಪರಿಶೀಲನೆ ನಡೆಸಿದಾಗ ನಗದು ಪತ್ತೆಯಾಗಿದೆ. ಲಕ್ಷಾನಟ್ಟಿ ಚೆಕ್‌ಪೋಸ್ಟ್‌ನಲ್ಲಿ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ಯೂನಿಯನ್‌ ಬ್ಯಾಂಕ್‌ನಿಂದ ಮುಧೋಳ ಯೂನಿಯನ್‌ ಬ್ಯಾಂಕ್‌ಗೆ ನಗದು ತೆಗೆದುಕೊಂಡು ಹೋಗಲಾಗುತ್ತಿತ್ತು ಎಂದು ಕಾರಿನಲ್ಲಿದ್ದವರು ಹೇಳಿದ್ದಾರೆ. ಆದ್ರೆ ಇದಕ್ಕೆ ಸೂಕ್ತ ದಾಖಲೆ ಒದಗಿಸಿಲ್ಲ.

ದಾಖಲೆ ಇಲ್ಲದ ಕಾರಣ ಕಾರಿನಲ್ಲಿದ್ದವರು ನೀಡಿದ ಹೇಳಿಕೆಯನ್ನು ಪೊಲೀಸರು ಒಪ್ಪಿಲ್ಲ. ದಾಖಲೆ ತೋರಿಸಿ ಹಣ ತೆಗೆದುಕೊಂಡು ಹೋಗಿ ಎಂದಿದ್ದಾರೆ. ಜೊತೆಗೆ ಕಾರಿನಲ್ಲಿದ್ದ ಐವರನ್ನೂ ವಶಕ್ಕೆ ತೆಗೆದುಕೊಂಡಿದ್ದಾರೆ.

Share Post