ಆರ್‌ಟಿಪಿಎಸ್ ಚಿಮಣಿ ಏರಿ ಆತ್ಮಹತ್ಯೆ ಬೆದರಿಕೆ
ರಾಯಚೂರು; ಇಲ್ಲಿನ ಶಕ್ತಿನಗರದ ಆರ್‌ಟಿಪಿಎಸ್ ಕಾರ್ಖಾನೆಯಲ್ಲಿ ಗುತ್ತಿಗೆ ನೌಕರನೊಬ್ಬ ಚಿಮಣಿ ಏರಿ ಆತ್ಮಹತ್ಯೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಗುತ್ತಿಗೆ ಕಾರ್ಮಿಕರಿಗೆ ಸಿಗಬೇಕಾದ ನ್ಯಾಯಬದ್ಧ ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿ ಸುನೀಲ್ ಎಂಬ ಗುತ್ತಿಗೆ ನೌಕರ ಆತ್ಮಹತ್ಯೆ ಬೆದರಿಕೆ ಹಾಕಿದ್ದಾನೆ.
ಚಿಮಣಿ ಏರುವ ಮೊದಲು ಇನ್‌ಸ್ಟಾಗ್ರಾಂನಲ್ಲಿ ಎಂಟು ನಿಮಿಷದ ವಿಡಿಯೋ ಹರಿಬಿಟ್ಟಿದ್ದಾನೆ. ಆ ವಿಡಿಯೋ ಈಗ ವೈರಲ್ ಆಗುತ್ತಿದೆ. ಕಾರ್ಮಿಕರು ಮತ್ತು ಅಧಿಕಾರಿಗಳ ಚಿಮಣಿ ಕೆಳಭಾಗದಲ್ಲಿ ನೆರೆದಿದ್ದು, ಮನವೊಲಿಸಲು ಪ್ರಯತ್ನಿಸುತ್ತಿದ್ದಾರೆ.