Districts

ಸಂಗೊಳ್ಳಿ ಪ್ರತಿಮೆಗೆ ಹಾನಿ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್‌

ಬೆಳಗಾವಿ: ಇಲ್ಲಿನ ಆನಗೋಳದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಂಎ ಭಗ್ನಗೊಳಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಮೂರೂ ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸುವ ಸಾಧ್ಯತೆ ಇದೆ.

ಈ ಬಗ್ಗೆ ಹೇಳಿಕೆ ನೀಡಿರುವ ಬೆಳಗಾವಿ ಪೊಲೀಸ್‌ ಆಯುಕ್ತ ತ್ಯಾಗರಾಜನ್‌, ಘಟನೆ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದೇವೆ. ವಿಚಾರಣೆ ನಡೆಸುತ್ತಿದ್ದೇವೆ. ಕೋರ್ಟ್‌ ಮುಂದೆ ಆರೋಪಿಗಳನ್ನು ಹಾಜರುಪಡಿಸುತ್ತೇವೆ ಎಂದು ಹೇಳಿದ್ದಾರೆ.

ಶುಕ್ರವಾರ ತಡರಾತ್ರಿ ಎಂಇಎಸ್‌ ಕಾರ್ತಕರ್ತರು ಬೆಳಗಾವಿಯಲ್ಲಿ ಪುಂಡಾಟಿಕೆ ನಡೆಸಿದ್ದರು. ಕಂಡ ಕಂಡಲ್ಲಿ ಕಲ್ಲು ತೂರಾಟ ನಡೆಸಿದ್ದರು. ಕಟ್ಟಡಗಳು, ಹೋಟೆಲ್‌ಗಳಿಗೆ ಕಲ್ಲು ತೂರಿ ಕಿಟಕಿ ಗಾಜುಗಳನ್ನು ಪುಡಿ ಮಾಡಿದ್ದರು. ಇದೇ ವೇಳೆ ಆನಗೋಳದಲ್ಲಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಗೂ ಹಾನಿ ಮಾಡಲಾಗಿದ್ದು, ಪ್ರತಿಮೆಯನ್ನು ಭಗ್ನಗೊಳಿಸಿದ್ದರು.

ಇದನ್ನು ಗಂಭೀರವಾಗಿ ತೆಗೆದುಕೊಂಡಿರುವ ಬೆಳಗಾವಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕೃತ್ಯದ ರೂವಾರಿಗಳಿಗಾಗಿಯೂ ಹುಡುಕಾಟ ನಡೆಸಲಾಗುತ್ತಿದೆ.

 

Share Post