Districts

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪ ಪಾತ್ರ ಎಳ್ಳಷ್ಟೂ ಇಲ್ಲ; ಕೇಂದ್ರ ಸಚಿವ ಪಲ್ಹಾದ್‌ ಜೋಷಿ

ಧಾರವಾಡ; ಸಚಿವ ಈಶ್ವರಪ್ಪ ವಿರುದ್ಧದ ನಲವತ್ತು ಪರ್ಸೆಂಟ್‌ ಆರೋಪ ನಿರಾಧಾರ ಎಂದು ಕೇಂದ್ರ ಸಚಿವ ಪಲ್ಹಾದ್‌ ಜೋಷಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡ ಸಂತೋಷ್‌ ಅವರು ಸುಮ್ಮನೆ ಆರೋಪ ಮಾಡಿದ್ದರು ಅಷ್ಟೆ. ಆದ್ರೆ ಯಾವುದೇ ದಾಖಲೆಗಳನ್ನು ನೀಡಿರಲಿಲ್ಲ ಎಂದು ಜೋಷಿ ಹೇಳಿದ್ದಾರೆ.

ಈ ಪ್ರಕರಣದಲ್ಲಿ ಈಶ್ವರಪ್ಪ ಅವರ ಪಾತ್ರ ಏನೂ ಇಲ್ಲ. ವಿನಾಕಾರಣ ಅವರ ಮೇಲೆ ಆರೋಪ ಮಾಡಲಾಗಿದೆ. ಅವರ ವಿರುದ್ಧದ ಆರೋಪಕ್ಕೆ ಯಾವುದೇ ದಾಖಲೆಗಳಿಲ್ಲ. ಹೀಗಾಗಿ ಈಶ್ವರಪ್ಪ ಅವರು ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಪ್ರಲ್ಹಾದ್‌ ಜೋಷಿ ಇದೇ ವೇಳೆ ಹೇಳಿದ್ದಾರೆ.

Share Post