CrimeDistricts

ಸ್ಯಾಂಟ್ರೋ ರವಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಮೈಸೂರು; ಹಲವು ಗಂಭೀರ ಆರೋಪಗಳನ್ನೊತ್ತು ತಲೆಮರೆಸಿಕೊಂಡಿರುವ ಸ್ಯಾಂಟ್ರೋ ರವಿ ಸಲ್ಲಿಸಿದ್ದ ನಿರೀಕ್ಷಾ ಜಾಮೀನು ಅರ್ಜಿ ಇಂದೂ ಕೂಡಾ ಇತ್ಯರ್ಥವಾಗಿಲ್ಲ.. ಮೈಸೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜನವರಿ 17ಕ್ಕೆ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ.

ಇಂದು ಸ್ಯಾಂಟ್ರೋ ರವಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಕೋರ್ಟ್ ನಲ್ಲಿ ನಡೆಯಿತು. ವಿಚಾರಣೆ ವೇಳೆ ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಿ ವಕೀಲರು ಕಾಲಾವಕಾಶ ಕೇಳಿದ ಹಿನ್ನಲೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿ ವಿಚಾರಣೆಯನ್ನು ಜನವರಿ 17ಕ್ಕೆ ಕೋರ್ಟ್ ಮುಂದೂಡಿದೆ. ಈ ಮಧ್ಯೆ ಸ್ಯಾಂಟ್ರೋ ರವಿ ಕಾರು ಚಾಲಕ ಗಿರೀಶ್ ​ನನ್ನು ರಾಮನಗರ ಎಸ್ ​ಪಿ ಸಂತೋಷ್​ ಬಾಬು ನೇತೃತ್ವದ ತಂಡ ವಶಕ್ಕೆ ಪಡೆದಿದೆ. ರಾಮನಗರ ಜಿಲ್ಲೆಯ ರೆಸಾರ್ಟ್, ಹೋಮ್​ಸ್ಟೇಗಳಲ್ಲಿ ಶೋಧ ನಡೆಸುತ್ತಿದ್ದಾಗ ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ರಾಜ್ಯದ ಹಲವೆಡೆ ಸ್ಯಾಂಟ್ರೋ ರವಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದ್ದು, ಕರ್ನಾಟಕ-ಕೇರಳ ಗಡಿ ಭಾಗದಲ್ಲೂ ಶೋಧ ನಡೆಸಲಾಗುತ್ತಿದೆ. ಆದ್ರೆ ಸ್ಯಾಂಟ್ರೋ ರವಿ ಮೊಬೈಲ್‌ ಸ್ವಿಚ್‌ ಆಫ್‌ ಮಾಡಿಕೊಂಡಿಕೊಂಡಿರುವುದರಿಂದ ಆತನ ಬಗ್ಗೆ ಯಾವುದೇ ಮಾಹಿತಿ ಸಿಗುತ್ತಿಲ್ಲ. ಪೊಲೀಸರು ನಿರಂತರವಾಗಿ ಆತನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share Post