DistrictsPolitics

ಹಿಂದೂ ಧರ್ಮದ ಬಗ್ಗೆ ವಿವಾದಿತ ಹೇಳಿಕೆ; ಸತೀಶ್‌ ಜಾರಕಿಹೊಳಿ ಹೇಳಿಕೆಗೆ ಡಿಕೆಶಿ ಆಕ್ಷೇಪ

ಬೆಳಗಾವಿ; ಹಿಂದೂ ಎಂಬ ಪದ ಭಾರತದ್ದಲ್ಲ, ಅದು ಪರ್ಷಿಯಾ ಭಾಷೆಯಿಂದ ಬಂದ ಪದವಾಗಿದ್ದು, ಹಿಂದೂ ಎಂಬ ಪದಕ್ಕೆ ಪರ್ಷಿಯಾ ಭಾಷೆಯಲ್ಲಿ ಅಶ್ಲೀಲವಾದ ಅರ್ಥಗಳಿವೆ ಎಂದು ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ ವಿವಾದಿತ ಹೇಳಿಕೆ ನೀಡಿದ್ದರು. ಸತೀಶ್‌ ಜಾರಕಿಹೊಳಿಯವರ ಈ ಹೇಳಿಕೆಗೆ ಕಾಂಗ್ರೆಸ್‌ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಹಿಂದೂ ಧರ್ಮದ ಬಗ್ಗೆ ಸತೀಶ್‌ ಜಾರಕಿಹೊಳಿ ಮಾತನಾಡಿದ್ದು ತಪ್ಪು ಎಂದು ಹೇಳಿದ್ದಾರೆ.

ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸತೀಶ್ ಜಾರಕಿಹೊಳಿಯವರು ಯಾವ ಅರ್ಥದಲ್ಲಿ ಈ ರೀತಿ ಹೇಳಿದ್ದಾರೆ ಅನ್ನೋದು ಗೊತ್ತಿಲ್ಲ. ಆದ್ರೆ ಹಿಂದೂ ಧರ್ಮದ ಬಗ್ಗೆ ಮಾತನಾಡುವ ಹಕ್ಕು ಯಾರಿಗೂ ಇಲ್ಲ, ಅವರ ಹೀಗೆ ಮಾತನಾಡಬಾರದಿತ್ತು. ತಮ್ಮ ಹೇಳಿಕೆ ಹಿಂಪಡೆಯುವಂತೆ ಸೂಚನೆ ನೀಡುತ್ತೇನೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇತ್ತ ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕೂಡಾ ಸತೀಶ್‌ ಜಾರಕಿಹೊಳಿ ಹೇಳಿಕೆ ವಿಷಾಧ ವ್ಯಕ್ತಪಡಿಸಿದ್ದಾರೆ. ಸತೀಶ್‌ ಜಾರಕಿಹೊಳಿಯವರ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ಹಿಂದೂ ಧರ್ಮ ಎಂಬುದು ಜೀವನ ವಿಧಾನ ಹಾಗೂ ಅದು ವಾಸ್ತವ ಎಂದು ಸುರ್ಜೇವಾಲ ಅವರು ಸಮರ್ಥಿಸಿಕೊಂಡಿದ್ದಾರೆ.

Share Post