ಶಾಲಾ ವಾಹನ ಕೆರೆ ಏರಿಗೆ ಡಿಕ್ಕಿ; 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ದಾವಣಗೆರೆ: ಶಾಲೆಯಿಂದ ವಾಪಸ್ ಬರುವಾಗ ಶಾಲಾ ವಾಹನ ಕೆರೆ ಏರಿಗೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಹಾಲೇಹಳ್ಳಿ ಕ್ರಾಸ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಶಾಲಾ ವಾಹನದಲ್ಲಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಗಾಯವಾಗಿದೆ. ಗಾಯಾಳುಗಳಿಗೆ ಜಗಳೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.