ಅರಮನೆ ನಗರಿಯಲ್ಲಿ 1ರಿಂದ 9ನೇ ತರಗತಿವರೆಗೂ ಶಾಲೆ ಬಂದ್
ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿವರೆಗೆ ಶಾಲೆಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಇಂದು ನಡೆದ ವರ್ಚುವಲ್ ಸಭೆಯಲ್ಲಿ ಶಾಲೆ ಬಂದ್ ಬಗ್ಗೆ ಜಿಲ್ಲಾಧಿಕಾರಿಗಳಿಗೆ ನಿರ್ಣಯ ತೆಗೆದುಕೊಳ್ಳಬಹುದು ಎಂಬ ಸಿಎಂ ಅನುಮತಿ ಬೆನ್ನಲ್ಲೇ ಮೈಸೂರಿನಲ್ಲಿ ಶಾಲೆ ಬಂದ್ ಮಾಡಿ ಆದೇಶ ಹೊರಡಿಸಿದ್ದಾರೆ.
ಇನ್ನೂ ರಾಜ್ಯಾದ್ಯಂತ ಶಾಲೆ ಬಂದ್ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಬಿ.ಸಿ.ನಾಗೇಶ್ ಎಲ್ಲಾ ಕಡೆ ಏಕಕಾಲಕ್ಕೆ ಶಾಲೆ ಮುಚ್ಚುವುದಿಲ್ಲ. ಕೊರೊನಾ ಹೆಚ್ಚಾದ ಕಡೆ ಶಾಲೆ ಮುಚ್ಚಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾರೂ ಭಯಪಡುವ ಅಗತ್ಯವಿಲ್ಲ. ಮಕ್ಕಳ ಆರೋಗ್ಯದಲ್ಲಿ ಯಾವುದೇ ಕಾರಣಕ್ಕೂ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುವುದಿಲ್ಲ. ಪೋಷಕರು ಭಯಪಡುವ ಅಗತ್ಯವಿಲ್ಲ ಮಕ್ಕಳಿಗೆ ಲಸಿಕಾ ಅಭಿಯಾನ ನಡೆಯುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಸಿದ್ರು.