CrimeDistricts

ಹೊಳೆ ನರಸೀಪುರದಲ್ಲಿ ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನ

ಹಾಸನ; ಹಾಸನ ಜಿಲ್ಲೆ ಹೊಳೆ ನರಸೀಪುರದಲ್ಲಿ ಕಳೆದ ರಾತ್ರಿ ಸರಣಿ ಕಳ್ಳತನ ನಡೆದಿದೆ. ಇಲ್ಲಿನ ಗಾಂಧಿ ವೃತ್ತದಲ್ಲಿರುವ ಪುರಸಭೆ ಎದುರಿನ ಎಂಟು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ.

ಹೊಳೆನರಸೀಪುರದ ಹೃದಯ ಭಾಗದಲ್ಲಿರುವ ಪುರಸಭೆ ಎದುರೇ ಇರುವ 7 ದಿನಸಿ ಅಂಗಡಿಗಳು, 1 ಬಟ್ಟೆ ಅಂಗಡಿಯಲ್ಲಿ ತಡರಾತ್ರಿ ಕಳ್ಳತನ ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ರೋಲಿಂಗ್ ಶಟರ್ ಮುರಿದು ಒಳನುಗ್ಗಿದ ಕಳ್ಳರು 5 ಲಕ್ಷ ರೂ. ನಗದು, ಬೆಲೆ ಬಾಳುವ ಬಟ್ಟೆಗಳು ಹಾಗೂ ವಸ್ತುಗಳನ್ನು ಕೊಂಡೊಯ್ದಿದ್ದಾರೆ.

ಅಂಗಡಿಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸ್ ಬೀಟ್ ವ್ಯವಸ್ಥೆ ಸರಿಯಾಗಿ ಇಲ್ಲದೆ ಇರುವುದೇ ಕಳ್ಳತನಕ್ಕೆ ಕಾರಣ ಎಂದು ವರ್ತಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post