CrimeDistricts

ಪ್ರಾಂಶುಪಾಲನಿಂದ ಲೈಂಗಿಕ ಕಿರುಕುಳ; ಕೈಕುಯ್ದುಕೊಂಡ ವಿದ್ಯಾರ್ಥಿನಿ

ಶಿವಮೊಗ್ಗ; ಹಾಸ್ಟೆಲ್‌ನಲ್ಲಿದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿದ್ದು, ಇದರಿಂದ ಮೊನನೊಂದ ಆಕೆ ಕೈಕುಯ್ದುಕೊಂಡಿರುವ ಘಟನೆ ನಡೆದಿದೆ. ಶಿವಮೊಗ್ಗದ ಖಾಸಕಿ ಕಾಲೇಜೊಂದ ವಿದ್ಯಾರ್ಥಿನಿ ಕೈ ಕುಯ್ದುಕೊಂಡಿದ್ದು, ಇದೀಗ ಆಕೆಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಿದ್ಯಾರ್ಥಿನಿ ಎಸ್‌ಸಿ.ಎಸ್‌ಟಿ ಹಾಸ್ಟೆಲ್‌ನಲ್ಲಿದ್ದು ಖಾಸಗಿ ಕಾಲೇಜಿಗೆ ಹೋಗುತ್ತಿದ್ದಳು. ಆಕೆಗೆ ಕಾಲೇಜಿನ ಪ್ರಾಂಶುಪಾಲ ಲೈಂಗಿಕ ಕಿರುಕುಳ ನೀಡಿದ್ದಾರೆ. ಪ್ರೀತಿಸುವುದಾಗಿ ನಾಟಕವಾಡಿದ್ದಾನೆ. ಇದರಿಂದ ಬೇಸತ್ತ ವಿದ್ಯಾರ್ಥಿ ಬುಧವಾರ ಸಂಜೆ ಕೈ ಕುಯ್ದುಕೊಂಡಿದ್ದಾಳೆ. ಕೂಡಲೇ ಅಲ್ಲಿದ್ದವರು ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆರೋಪಿಯ ವಿರುದ್ಧ ಪೊಲೀಸರು ಪೋಕ್ಸೋ ಹಾಗೂ ಅಟ್ರಾಸಿಟಿ ಕಾಯ್ದೆಯಡಿ ಕೇಸ್‌ ದಾಖಲಿಸಿದ್ದಾರೆ.

Share Post