ಕೊರೋನಾ: ಶಕುನ ರಂಗನಾಥ ಸ್ವಾಮಿ ಜಾತ್ರೆ ರದ್ದು
ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೋನಾ ಹಾಗೂ ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುತ್ತಿರುವುದರಿಂದ ಚಿಕ್ಕಮಗಳೂರು ನಡೆಯಬೇಕಿದ್ದ ಜಾತ್ರೆಯನ್ನು ರದ್ದುಪಡಿಸಿದ್ದಾರೆ. ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಶ್ರೀ ಶಕುನ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ರದ್ದುಗೊಳಿಸಿ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಆದೇಶ ಹೊರಡಿಸಿದ್ದಾರೆ. ಜನವರಿ ೧೪ ರಿಂದ ೧೭ರವರೆಗೆ ಶಕುನ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ನಡೆಯಬೇಕಿತ್ತು. ಆದರೆ ಕೊರೋನಾ ಹಾವಳಿಯಿಂದ ಜಾತ್ರೆಯನ್ನು ರದ್ದುಗೊಳಿಸಲಾಗಿದೆ. ಪ್ರತಿವರ್ಷ ಸಂಕ್ರಾತಿಗೆ ಶಕುನ ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನಡೆಯುತ್ತಿತ್ತು. ಈ ಜಾತ್ರೆಗೆ ವಿವಿಧ ಕಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಬಂದು ದೇವರ ದರ್ಶನ ಪಡೆಯುತ್ತಿದ್ದರು. ಈ ಬಾರಿ ಜಾತ್ರೆ ರದ್ದು ಮಾಡಿದ್ದಕ್ಕೆ ಭಕ್ತರು
ಹಾಗೂ ಜನಸಾಮಾನ್ಯರ ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಕೆಲ ನಿರ್ಬಂದಗಳನ್ನು ಜಾರಿಮಾಡಿದೆ. ಅದೇ ರೀತಿ ಚಿಕ್ಕಮಗಳೂರು ಜಿಲ್ಲೆ ಪ್ರವಾಸಿ ತಾಣವಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ವಹಿಸಿದೆ.