ಹರ್ಷ ಕೊಲೆ ಪ್ರಕರಣ; ಸರ್ಕಾರದಿಂದ 25 ಲಕ್ಷ ರೂ. ಪರಿಹಾರ
ಶಿವಮೊಗ್ಗ: ಇತ್ತೀಚೆಗೆ ಕೊಲೆಯಾದ ಹಿಂದೂ ಪರ ಸಂಘಟನೆ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸರ್ಕಾರದಿಂದ ಹರ್ಷ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಭಾನುವಾರ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ನಾನು ಹರ್ಷ ಕುಟುಂಬಕ್ಕೆ 25 ಲಕ್ಷ ರೂಪಾಯಿ ಚೆಕ್‌ನನ್ನು ಹಸ್ತಾಂತರಿಸುತ್ತೇವೆ ಎಂದು ಹೇಳಿದ್ದಾರೆ.
ಭಾನುವಾರ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಹರ್ಷ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ನಾನು ಹಾಗೂ ಯಡಿಯೂರಪ್ಪ ಅವರು ಸರ್ಕಾರದ ಪರವಾಗಿ 25 ಲಕ್ಷ ರೂ. ಪರಿಹಾರದ ಚೆಕ್ ನೀಡುತ್ತೇವೆ ಎಂದರು.