DistrictsPolitics

ಶಿವಾಜಿ ಮೂರ್ತಿ ಅನಾವರಣ; ಒಂದೇ ವೇದಿಕೆಯಲ್ಲಿ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್‌

ಬೆಳಗಾವಿ; ರಾಜಕೀಯ ಬದ್ಧ ವೈರಿಗಳಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ರಮೇಶ್‌ ಜಾರಕಿಹೊಳಿ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇಂದು ಬೆಳಗಾವಿಯ ರಾಜಹಂಸಗಡ ಕೋಟೆ ಶಿವಾಜಿ ಮೂರ್ತಿ ಲೋಕಾರ್ಪಣೆ ಮಾಡಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಇಬ್ಬರೂ ವೈರಿಗಳು ಒಂದೇ ವೇದಿಕೆ ಹಂಚಿಕೊಂಡಿದ್ದಾರೆ.

43 ಕೋಟಿ ರೂಪಾ ವೆಚ್ಚದಲ್ಲಿ ಈ ಕಾಮಗಾರಿ ನಡೆಸಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿನಿಧಿಸುವ ಕ್ಷೇತ್ರದಲ್ಲಿ ಈ ಕೋಟೆ ಬರುತ್ತದೆ. ಹೀಗಾಗಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರು ಶಿವಾಜಿ ಮೂರ್ತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದರಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಕೂಡಾ ಭಾಗಿಯಾಗಿದ್ದಾರೆ.

 

 

Share Post