CrimeDistricts

ಶಿವಮೊಗ್ಗದಲ್ಲಿ ಚಾಕು ಇರಿತ ಪ್ರಕರಣ; ಇದಕ್ಕೆ ಇತಿಶ್ರೀ ಹಾಡಬೇಕು – ಬಿ.ವೈ.ವಿಜಯೇಂದ್ರ

ಶಿವಮೊಗ್ಗ; ಶಿವಮೊಗ್ಗದಲ್ಲಿ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಪದೇ ಪದೇ ಇಂತಹ ಘಟನೆಗಳು ನಡೆಯುತ್ತಿರುವುದು ರಾಜ್ಯಕ್ಕೆ ಕಪ್ಪು ಚುಕ್ಕೆಯಾಗಿದೆ ಎಂದು ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಗೋಲಿ, ಬುಗುರಿ ಆಡೋ ಹುಡುಗರೆಲ್ಲಾ ಚೂರು ಹಿಡಿದುಕೊಂಡು ಓಡಾಡುತ್ತಿದ್ದಾರೆ. ಇದನ್ನು ಮಟ್ಟ ಹಾಕಲೇಬೇಕಾಗಿದೆ ಎಂದು ಹೇಳಿದರು. ಕಾಂಗ್ರೆಸ್‌ ಪಕ್ಷ ಇದನ್ನು ರಾಜಕೀಯಗೊಳಿಸುತ್ತಿದೆ ಎಂದು ಇದೇ ವೇಳೆ ಆಕ್ರೋಶ ಹೊರಹಾಕಿದರು.

Share Post