CrimeDistricts

ಸಾವರ್ಕರ್‌ ಬ್ಯಾನರ್‌ ಹರಿದ ಕಿಡಿಗೇಡಿಗಳು; ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ

ಶಿವಮೊಗ್ಗ;  ಸಾವರ್ಕರ್‌ ಬ್ಯಾನರ್‌ ಹಾಕಿದ್ದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಬ್ಯಾನರ್‌ ಕಿತ್ತು ಹಾಕಿರುವ ಘಟನೆ ಶಿವಮೊಗ್ಗದ ಅಮೀರ್‌ ಅಹ್ಮದ್‌ ವೃತ್ತದಲ್ಲಿ ನಡೆದಿದೆ. ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಹಾರ ನಡೆಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಘಟನೆ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಾದ್ಯಂತ ಇಂದು ಮತ್ತು ನಾಳೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

Share Post