CrimeDistricts

ಶಿವಮೊಗ್ಗ ಚೂರಿ ಇರಿತ ಪ್ರಕರಣ; ಆರೋಪಿ ಕಾಲಿಗೆ ಗುಂಡೇಟು

ಶಿವಮೊಗ್ಗ; ಬಟ್ಟೆ ಅಂಗಡಿ ಕೆಲಸಗಾರ ಪ್ರೇಮ್ ಸಿಂಗ್‌ಗೆ ಚೂರಿ ಇರಿದ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಶಿವಮೊಗ್ಗ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.ಮಾರ್ನಮಿಬೈಲು ನಿವಾಸಿ ಚರ್ಬಿ ಅಲಿಯಾಸ್ ಮೊಹಮ್ಮದ್ ಜಬಿ (30) ಬಂಧಿತ ಆರೋಪಿ. ಇದರೊಂದಿಗೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದಂತಾಗಿದೆ.

ಎನ್.ಟಿ.ರಸ್ತೆಯ ಫಲಕ್ ಪ್ಯಾಲೇಸ್ ಬಳಿ ಆರೋಪಿ ಚರ್ಬಿ ಇರುವ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಿತ್ತು. ಇಂದು ಬೆಳಗಿನ ಜಾವ ಪೊಲೀಸರು ಕಾರ್ಯಾಚರಣೆಗಿಳಿದಿದ್ದರು. ಈ ವೇಳೆ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ವಿನೋಬ‌ನಗರ ಠಾಣೆ ಪಿಎಸ್ ಐ ಮಂಜುನಾಥ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಇನ್ನು ಇದಕ್ಕೂ ಮೊದಲು ರೆಹಮಾನ್‌ ಮತ್ತು ನದೀಮ್‌ ಎಂಬುವವರನ್ನು ಕೂಡಾ ಬಂಧಿಸಲಾಗಿದೆ.

ಗಾಯಗೊಂಡ ಅರೋಪಿಯನ್ನು ಚಿಕಿತ್ಸೆಗೆ ಮೆಗ್ಗಾನ್ ಆಸ್ಲತ್ರೆಗೆ ದಾಖಲಿಸಲಾಗಿದೆ. ಪ್ರೇಮ್ ಸಿಂಗ್ ಮೇಲೆ ಚೂರಿ ಇರಿತದ ಪ್ರಕರಣದಲ್ಲಿ ಇಲ್ಲಿಯವರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

Share Post